ಶ್ರೀನಗರ: ಇಂದು ಬೆಳ್ಳಂಬೆಳಗ್ಗೆ ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕಾಕಾಪೊರಾದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಉಗ್ರರನ್ನು ಸದೆಬಡಿದಿದ್ದಾರೆ. ಅಲ್ಲದೇ ಇಬ್ಬರು ಉಗ್ರರನ್ನು ಸೇನೆ ಬಂಧಿಸಿದೆ.
ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಇನ್ನೂ ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿನ್ನೆ ರಾತ್ರಿಯಿಂದಲೇ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು.
ಈ ವರ್ಷ ಉಗ್ರರನ್ನು ಸದೆಬಡಿಯಲು ಕಾಶ್ಮೀರದಲ್ಲಿ ಸಾಲು ಸಾಲು ಗುಂಡಿನ ದಾಳಿಗಳು ನಡೆಯುತ್ತಲೇ ಇವೆ. ಕಾಶ್ಮೀರದಲ್ಲಿ ಈ ವರ್ಷ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪುಲ್ವಾಮಾ ಹಾಗೂ ಶೋಪಿಯಾನ್ ನಲ್ಲೇ ಅತಿಹೆಚ್ಚು ಕಾರ್ಯಾಚರಣೆ ನಡೆದಿವೆ.