ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ವಜಾ – ಭ್ರಷ್ಟಾಚಾರ ಆರೋಪದ ಮೇಲೆ ಬಂಧನ

ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ (VIJAYA SINGLA)ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿಸಲಾಗಿದ್ದು ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಲಾಗಿದೆ.

Punjab health minister Vijay Singla arrested after being dismissed by CM  Bhagwant Mann over graft charges


ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳಾಗಿದ್ದು ಮಾನ್ಸಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ 52 ವರ್ಷದ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವುದಾಗಿ ಮುಖ್ಯಮಂತ್ರಿಗಳೇ ಘೋಷಿಸಿದ್ದಾರೆ. ತನ್ನ ಇಲಾಖೆಯ ಟೆಂಡರ್‌ಗಳು ಮತ್ತು ಖರೀದಿಗಳಲ್ಲಿ ಸಿಂಗ್ಲಾ ಶೇಕಡಾ 1 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆಯಿಡುತ್ತಿದ್ದಾರೆ ಎಂದು ತಿಳಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾನ್ ಹೇಳಿದ್ದಾರೆ. ಇದನ್ನೂ ಓದಿ :-  ಸ್ಕ್ರಿಪ್ಟ್ ಬರೆಯೋರೇ ಬೇರೆ…ನಾಗೇಶ್ ಅವರದ್ದು ಕೇವಲ ನಟನೆ ಮಾತ್ರ – ಜಿ.ಪರಮೇಶ್ವರ್

Punjab minister arrested after CM Bhagwant Mann sacks him over corruption  charges - India News


ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೂ ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದು ಸಿಂಗ್ಲಾ ಅವರನ್ನು ಪಂಜಾಬ್ ಪೋಲಿಸರು ಬಂಧಿಸಿದ್ದಾರೆ ಎನ್ನಲಾಗಿದೆಯ ‘ನನ್ನ ಸರ್ಕಾರದ ಓರ್ವ ಸಚಿವ ತಮ್ಮ ಇಲಾಖೆಯ ಪ್ರತಿ ಟೆಂಡರ್ ಅಥವಾ ಖರೀದಿಯಿಂದ ಶೇಕಡಾ ಒಂದರಷ್ಟು ಕಮಿಷನ್ ಕೇಳುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿತ್ತು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಪ್ರಕರಣ ನನಗೆ ಮಾತ್ರ ತಿಳಿದಿತ್ತು. ಇದು ಮಾಧ್ಯಮ ಅಥವಾ ಪ್ರತಿಪಕ್ಷಗಳಿಗೆ ತಿಳಿದಿರಲಿಲ್ಲ ಎಂದು ಮಾನ್ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
‘ನಾನು ಆ ಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇನೆ. ಜೊತೆಗೆ ಅವರನ್ನು ಸಂಪುಟದಿಂದ ತೆಗೆದುಹಾಕುತ್ತಿದ್ದೇನೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ನಾನು ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ :-  ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣ – ವಿಚಾರಣೆ ಮೇ 26ಕ್ಕೆ ಮುಂದೂಡಿದ ಜಿಲ್ಲಾ ಕೋರ್ಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!