ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾದ ಪಂಜಾಬ್ ನ ನೂತನ ಮುಖ್ಯುಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ರಾಂಧವ ನೇಮಕಗೊಳ್ಳುವ ಸಾಧ್ಯತೆ ಇದೆ.
ಅಮರಿಂದರ್ ಸಿಂಗ್ ನೇತೃತ್ವದ ಸರಕಾರದಲ್ಲಿ ಜೈಲು ಮತ್ತು ಸಹಕಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಸುಖ್ವಿಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಿದೆ ಎಂದು ಹೇಳಲಾಗಿದೆ.
ಇದೇ ವೇಳೆ ಸುಖ್ವಿಂದರ್ ಸಿಂಗ್ ರಾಂಧವ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಕ್ಕು ಮಂಡನೆ ಹಅಗೂ ಸಮಯ ನಿಗದಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.