ದೇಶದಲ್ಲಿ ಕೋವಿಡ್ (Covid) ಪ್ರಕರಣಗಳು ದಿನೇ ದಿನೇ ಹೆಚ್ಚಳ ಆಗುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧಾರಣೆಗೆ (Mask wear) ಕೇಂದ್ರ ಸರ್ಕಾರ (Central government) ಒತ್ತು ನೀಡಿದೆ. ಮಾಸ್ಕ್ ಧರಿಸದ ಪ್ರಯಾಣಿಕರನ್ನು ಮುಲಾಜಿಲ್ಲದೇ ಕೆಳಿಗಿಳಿಸಿ ಎಂದು ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ (Directorate of aviation) ಖಡಕ್ ಎಚ್ಚರಿಕೆ ನೀಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆ ಕಾಣುತ್ತಿದೆ. ಆದಾಗ್ಯೂ ವಿಮಾನ ನಿಲ್ದಾಣಗಳಲ್ಲಿ (Airport) ಹಾಗೂ ವಿಮಾನಗಳಲ್ಲಿ (Flight) ಕೆಲವು ಬೇಜವಾಬ್ದಾರಿ ಪ್ರಯಾಣಿಕರು ಮಾಸ್ಕ್ ಧರಿಸಲು ನಿರಾಕರಿಸುತ್ತಿದ್ದಾರೆ. ಹೀಗಾಗಿ, ಮಾಸ್ಕ್ ಧರಿಸದ ಪ್ರಯಾಣಿಕರನ್ನು ವಿಮಾನ ಟೇಕ್ ಆಫ್ ಆಗುವ ಮುನ್ನ ಕೆಳಗಿಳಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ (DGCA) ಸೂಚನೆ ನೀಡಿದೆ, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಕಣ್ಣಿಡಿ ಎಂದು ಸಿಐಎಸ್ಎಫ್(CISF) ಪಡೆಗೂ ಡಿಜಿಸಿಎ ತಾಕೀತು ಮಾಡಿದೆ. ಇದನ್ನೂ ಓದಿ : – ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿರ್ಮಲಾ ಸೀತಾರಾಮನ್ ಔತಣ ಕೂಟ