ಮಸ್ಕಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳಗೆ ಭರ್ಜರಿ ಗೆಲುವು

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 86,337 ಮತ ಪಡೆಯುವ ಮೂಲಕ ಬರೋಬ್ಬರಿ 30,606 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ.

ಮೊದಲ ಸುತ್ತಿನಲ್ಲೇ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್​, ಅಂತಿಮವಾಗಿ 86,222 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದೆ.

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 55,731 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ. ಇದಕ್ಕೂ ಮುನ್ನವೇ ಅಂದರೆ ಮತ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಸೋಲೊಪ್ಪಿಕೊಂಡರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!