ಕಲಾತ್ಮಕ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್ ಶ್ರೀಲಂಕಾ ಪ್ರವಾಸದಲ್ಲಿ ಭಾರತ ಸೀಮಿತ ಓವರ್ ಗಳ ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ರವಿಶಾಸ್ತ್ರಿ ಇಂಗ್ಲೆಂಡ್ ನಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಟೆಸ್ಟ್ ಸರಣಿಯಲ್ಲಿ ಬ್ಯುಸಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಕೋಚ್ ರವಿಶಾಸ್ತ್ರಿ ಅನುಪಸ್ಥಿತಿಯಲ್ಲಿ ಭಾರತ ಆಡಲಿರುವ ಸೀಮಿತ ಓವರ್ ಗಳ ಸರಣಿಯಲ್ಲಿ ದ್ರಾವಿಡ್ ಕೋಚ್ ಆಗಿ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.
ಭಾರತ ತಂಡದ ಮಾಜಿ ನಾಯಕರೂ ಆಗಿದ್ದ ದ್ರಾವಿಡ್, 2014ರಲ್ಲಿ ಭಾರತ ತಂಡದ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದರು.
ಜುಲೈ 13ರಿಂದ 17ರವರೆಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡ 3 ಏಕದಿನ ಮತ್ತು 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಸರಣಿಗೆ ಮಾಸಾಂತ್ಯದಲ್ಲಿ ತಂಡ ಪ್ರಕಟವಾಗಲಿದೆ.