ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( RAHUL GANDHI )ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 52ನೇ ವರ್ಷಕ್ಕೆ ಕಾಲಿಟ್ಟಿರುವ ರಾಹುಲ್ ಗಾಂಧಿ ಅವರು, ಕೇಂದ್ರದ ಅಗ್ನಿಪಥ್ ( AGNIPATH) ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (JAY RAM RAMESH ) ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ನನ್ನ ಜನ್ಮದಿನದಂದು ಯಾವುದೇ ರೀತಿಯ ಆಚರಣೆಗಳನ್ನು ಮಾಡಬೇಡಿ ಎಂದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತವಿರುವ ನನ್ನ ಹಿತೈಷಿಗಳಿಗೆ ಮನವಿ ಮಾಡುತ್ತೇನೆ. ದೇಶದಲ್ಲಿ ಸದ್ಯದ ಪರಿಸ್ಥಿತಿ ಹದಗೆಟ್ಟಿದೆ. ಕೋಟಿ ಗಟ್ಟಲೆ ಯುವಕರು ಗೊಂದಲಕ್ಕೊಳಗಾಗಿದ್ದಾರೆ. ನಾವು ಯುವಕರು ಮತ್ತು ಅವರ ಕುಟುಂಬಸ್ಥರ ನೋವಿನಲ್ಲಿ ಪಾಲ್ಗೊಳ್ಳಬೇಕು ಮತ್ತು ಅವರೊಂದಿಗೆ ನಿಲ್ಲಬೇಕು ಎಂದು ರಾಹುಲ್ ಗಾಂಧಿ ತಿಳಿಸಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : – ರಾಹುಲ್ ಗಾಂಧಿಗೆ 3 ದಿನ ED ಯಿಂದ ರಿಲೀಫ್