ಇದು ಮಹಾ ಜುಮ್ಮಾಗಳ ಸರ್ಕಾರ – ED ವಿಚಾರಣೆಯಿಂದ ಹೊರಬರುತ್ತಿದ್ದಂತೆಯೇ ಮೋದಿ ವಿರುದ್ದ ರಾಹುಲ್ ಗಾಂಧಿ ಟ್ವೀಟ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಎರಡನೆಯ ದಿನವಾದ ಇಂದು ಕೂಡ ರಾಹುಲ್ ಗಾಂಧಿ ವಿಚಾರಣೆ ನಡೆಯಿತು. ವಿಚಾರಣೆ ಮುಗಿಸಿಕೊಂಡು ಹೊರಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಹಿಂದಿಯಲ್ಲಿ ಟ್ವೀಟ್ ಮಾಡಿ, ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಉದ್ಯೋಗ ನೀಡುವ ಭರವಸೆ ನೀಡಿದ್ದ ಮೋದಿ ವಿರುದ್ಧ ಮುಗಿಬಿದ್ದಿದ್ದಾರೆ. 8 ವರ್ಷಗಳ ಹಿಂದೆ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗಗಳ ಭರವಸೆ ನೀಡಲಾಗಿತ್ತು. ಆದರೆ ಈಗ 10 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಸರದಿ ಬಂದಿದೆ. ಇದು ಜುಮ್ಮಾ’ಗಳ ಸರ್ಕಾರವಲ್ಲ, ‘ಮಹಾ ಜುಮ್ಮಾ `ಗಳ ಸರ್ಕಾರ. ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿಸುವುದರಲ್ಲಿ ಪರಿಣತರಲ್ಲ, ಉದ್ಯೋಗಗಳ ಕುರಿತು ‘ಸುದ್ದಿ ಮಾಡುವುದರಲ್ಲಿ ನಿಪುಣರು ಎಂದು ಜರಿದಿದ್ದಾರೆ.

ಇದನ್ನೂ ಓದಿ : – ರಾಷ್ಟ್ರಪತಿ ಚುನಾವಣೆ ಕುರಿತು ಚರ್ಚಿಸಲು ನಾಳೆ ಮಮತಾ ಬ್ಯಾನರ್ಜಿ ಸಭೆ – ಕಾಂಗ್ರೆಸ್ , ಎನ್ ಸಿ ಪಿ ಭಾಗಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!