ರಾಹುಲ್, ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್ – ಪ್ರತಿಭಟನೆ ತಡೆದ ಪೊಲೀಸರು, ಹಲವು ನಾಯಕರು ವಶಕ್ಕೆ

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಕೈಗೊಂಡಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ಈ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೆ, ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.


ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ತಮ್ಮ ನಾಯಕರಿಗೆ ಬೆಂಬಲ ವ್ಯಕ್ತಪಡಿಸಿ ಘೋಷಣೆ ಕೂಗುತ್ತಾ ಪ್ರತಿಭಟನೆ ಆರಂಭಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನೆಯನ್ನು ತಡೆದು, ಹಲವರನ್ನು ವಶಕ್ಕೆ ಪಡೆದುಕೊಂಡರು ಎಂದು ವರದಿಗಳು ತಿಳಿಸಿವೆ. ಪ್ರತಿಭಟನೆ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ , ರಾಹುಲ್ ಗಾಂಧಿ ನೇತೃತ್ವದಲ್ಲಿ ಸತ್ಯ ಕಾ ಸಂಗ್ರಾಮ್’ ಮುಂದುವರೆಯಲಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರು ಕೂಡ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ, ಇನ್ನು ಈ ಆಡಳಿತಾರೂಢ ಬಿಜೆಪಿ ಸರ್ಕಾರ ಏನು ಮಾಡುತ್ತದೆ ಎಂದು ಪ್ರಶ್ನಿಸಿದರು.


ಸೆಕ್ಷನ್ 144 ಜಾರಿ
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಸೆಕ್ಷನ್ 144 ಜಾರಿಯಲ್ಲಿರುವ ಹಿನ್ನೆಲೆಯಲ್ಲಿ 4ಕ್ಕೂ ಹೆಚ್ಚು ಜನರು ಒಂದೆಡೆ ಗುಂಪುಗೂಡುವಂತಿಲ್ಲ ಎಂದು ಆದೇಶ ನೀಡಲಾಗಿದೆ.

ಇದನ್ನೂ ಓದಿ : –  ರಾಹುಲ್ ಸೋನಿಯಾಗೆ ED ನೋಟಿಸ್ ಜಾರಿ ಖಂಡಿಸಿ ಕಾಂಗ್ರೆಸ್ ಹೋರಾಟ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!