ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharathjodo yatre) ಯು BJP ಭದ್ರನೆಲೆಯಾಗಿರುವ ಮಧ್ಯ ಪ್ರದೇಶ (Madhya pradesh) ರಾಜ್ಯದ ಭೋರ್ಗಾಂವ್ ನಿಂದ ಇಂದು ಬೆಳಗ್ಗೆ ಪ್ರಾರಂಭವಾಗಿದೆ. ಭಾರತ್ ಜೋಡೋ ಯಾತ್ರೆಯು 78ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ಯಾತ್ರೆಯಲ್ಲಿ ರಾಹುಲ್ ಗೆ ಸಹೋದರಿ ಪ್ರಿಯಾಂಕಾ ಗಾಂಧಿ ಸಾಥ್ ನೀಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪ್ರಿಯಾಂಕಾ ಗಾಂಧಿ (Priyanka gandhi) , ಪತಿ ರಾಬರ್ಟ್ ವಾದ್ರಾ ಸೇರಿದಂತೆ ಅನೇಕ ಕಾರ್ಯಕರ್ತರು, ಪಕ್ಷದ ಮುಖಂಡರು, ರೈತರು, ಮಹಿಳೆಯರು ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಮುಂದಿನ 10 ದಿನಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರತ್ ಜೋಡೋ ಸಂಚರಿಸಲಿದೆ. ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಶುರುವಾದ ಯಾತ್ರೆ ಈ ವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಸಂಚರಿಸಿ ಇದೀಗ ಮಧ್ಯಪ್ರದೇಶದಲ್ಲಿ ಸಾಗುತ್ತಿದೆ.
ಇದನ್ನೂ ಓದಿ : – ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು ಗೊತ್ತಾ..?