ಗಾಂಧಿ ಪ್ರತಿಮೆ ಮುಂದೆ ರೈತರ ಉಪವಾಸ ಸತ್ಯಾಗ್ರಹ

ರಾಯಚೂರು: ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಸಂಯುಕ್ತ ಹೋರಾಟ ರಾಯಚೂರು ಜಿಲ್ಲಾ ಸಮಿತಿಯಿಂದ 1 ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದರು.
ನಗರದ ಜಿಲ್ಲಾ ಕ್ರೀಡಾಂಗಣ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೇಂದ್ರ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು, ಶಾಂತಿಯುತವಾಗಿ ನಡೆದ ರೈತರ ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿಕೊಂಡು ಹೋರಾಟವನ್ನು ಹಿಂಸಾಚಾರಕ್ಕೆ ತಿರುಗಿಸಿದರು. ದೆಹಲಿಯಲ್ಲಿ ನಡೆದ ಹಿಂಸಾಚಾರದ ಹಿಂದೆ ಬಿಜೆಪಿ ಕೈವಾಡವಿದೆ. ಪ್ರಧಾನಿಯವರು ಏಕಮುಖವಾಗಿ ಶ್ರೀಮಂತ,ಕಾರ್ಪೊರೇಟ್ ಪರವಾಗಿದ್ದಾರೆ ಅದನ್ನು ಬಿಟ್ಟು, ರೈತ ಮತ್ತು ಕಾರ್ಮಿಕರ ಪರವಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.