ರಾಯಚೂರು: ಅಕ್ರಮ ಕಳ್ಳಬಟ್ಟಿ ಸಾರಾಯಿ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ 108 ಲೀಟರ್ ಬೆಲ್ಲದ ಕೊಳೆ ಮತ್ತು 38 ಲೀಟರ್ ಕಳ್ಳಬಟ್ಟಿ ಸಾರಾಯಿಯನ್ನೂ ವಶಪಡಿಸಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಾನ್ವಿ ತಾಲ್ಲೂಕಿನ ಆಲ್ಕೋಡ್ ತಾಂಡಾದಲ್ಲಿ ದಾನಮ್ಮಕೆಸಪ್ಪ ಮತ್ತು ಶಾರದಾಹೆಮ್ಲಪ್ಪ ಮನೆಯಲ್ಲಿ ಅಕ್ರಮ ಕಳ್ಳಭಟ್ಟಿ ಸರಾಯಿ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದಾಳಿ ವೇಳೆ ಕಳ್ಳಬಟ್ಟಿ ತಯಾರಿಸುತ್ತಿದ್ದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಅವರ ಮೇಲೆ ಪ್ರತ್ಯೇಕ 2ಪ್ರಕರಣ ದಾಖಲಿಸಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಅಬಕಾರಿ ಉಪ ಅಧೀಕ್ಷಕ ಲಕ್ಷ್ಮಿ ಎಂ ನಾಯಕ್ ತಿಳಿಸಿದ್ದಾರೆ.