ರಾಯಚೂರು: ವಟಗಲ್ ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಬೇಕೆಂದು ಹೋರಾಟ ಸಮಿತಿಯ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ನಗರದ ಅಂಬೇಡ್ಕರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಸದಸ್ಯರು ಪ್ರತಿಭಟನಾ ಜಾಥಾ ನಡೆಸಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಸದಸ್ಯರು ಮಾತನಾಡಿದರು. ವಟಗಲ್ ಬಸವೇಶ್ವರ ಏತ ನೀರಾವರಿ ಯೋಜನೆಗೆ ಸರ್ಕಾರ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಸಿದ್ದು, ಯೋಜನೆಯನ್ನು ಯಥಾವತ್ತಾಗಿ ಜಾರಿಗೊಳಿಸುಬೇಕು.
ಪಾಮನಕಲ್ಲೂರು, ಅಮೀನಗಡ, ಅಂಕುಶದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ 24 ಗ್ರಾಮಗಳಿಗೆ ಈ ಯೋಜನೆ ಅನುಕೂಲವಾಗಲಿದೆ. ಎನ್ಆರ್ಬಿಸಿ 5 ಎ ಹೋರಾಟ ಸಮಿತಿ ವಟಗಲ್ ಬಸವೇಶ್ವರ ಏತ ನೀರಾವರಿ ಯೋಜನೆ ರದ್ದುಪಡಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಆದರೆ ಈಗಾಗಲೇ ಸರಕಾರ ಒಪ್ಪಿಗೆ ಸೂಚಿಸಿ ಪ್ರಾರಂಭಿಸಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸ ಬಾರದು ಆದಷ್ಟು ಶೀಘ್ರವಾಗಿ ಯೋಜನೆಯನ್ನು ಮುಗಿಸಿಕೊಡಬೇಕು ಎಂದು ಒತ್ತಾಯಿಸಿದರು.