ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್ 17ರಿಂದ ಮಾರ್ಚ್ 20ರವರೆಗೆ ಸಂಚರಿಸುವುದಿಲ್ಲ.
0 100 Less than a minute