ರಾಜ್ಯದಲ್ಲಿ ಇಂದು ಮತ್ತು ನಾಳೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 7 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಬುಧವಾರ ಕರಾವಳಿ ಹಾಗೂ ಮಲೆನಾಡು ಭಾಗದ 7 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳನ್ನು ಯೆಲ್ಲೋ ಅಲರ್ಟ್ ಆಗಿ ಘೋಷಿಸಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೋಡಗಳು ಸೃಷ್ಟಿಯಾಗಿದ್ದು, ಏಪ್ರಿಲ್ 14 ಮತ್ತು 15ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.