ರಾಜಧಾನಿ ಬೆಂಗಳೂರಿನ ಹಲವೆಡೆ ಬುಧವಾರ ಸಂಜೆ ಭಾರೀ ಮಳೆಯಾಗಿದ್ದು, ಈ ಮಳೆ ಇನ್ನೂ ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ.
ಬೆಂಗಳೂರಿನ ಶೇಷಾದ್ರಿಪುರಂ, ಮೆಜೆಸ್ಟಿಕ್, ಮಾರುಕಟ್ಟೆ, ಚಾಮರಾಜಪೇಟೆ, ವಿಜಯನಗರ, ಜಯನಗರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.
ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿ ಇರುವುದರಿಂದ ಹೆಚ್ಚು ಸಮಸ್ಯೆ ಆಗಿಲ್ಲ. ಆದರೆ ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ತತ್ತರಿಸಿರುವ ಸೋಂಕಿತರಿಗೆ ಹಾಗೂ ಅವರ ಕುಟುಂಬಗಳಿಗೆ ಅಲ್ಪ ಪ್ರಮಾಣದ ಸಮಸ್ಯೆ ಆಗಿರುವುದು ವರದಿಯಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಸೃಷ್ಟಿಯಾಗಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದ.ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.