ಊಟಿಯಂತಾದ ಸಿಲಿಕಾನ್ ಸಿಟಿ – ಬೆಂಗಳೂರು ಸೇರಿ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರಿ (Bengaluru) ನಲ್ಲಿ ಬೆಳಗ್ಗೆಯಿಂದಲೇ ವರುಣ (Rain) ಕಾಟ ಕೊಡುತ್ತಿದ್ದಾನೆ. ವಾಹನ ಸವಾರ(Bike riders) ರು, ಕಚೇರಿಗೆ ತೆರಳುವವರು ಮಳೆಯಿಂದಾಗಿ ಪರದಾಡುವಂತಾಗಿದೆ. ಚಳಿ ಹಾಗೂ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಊಟಿಯಂತಾಗಿದೆ.

ಬೆಂಗಳೂರಿ (Bengaluru) ನಲ್ಲಿ ಬೆಳಗ್ಗೆಯಿಂದಲೇ ವರುಣ (Rain) ಕಾಟ ಕೊಡುತ್ತಿದ್ದಾನೆ. ವಾಹನ ಸವಾರ(Bike riders) ರು, ಕಚೇರಿಗೆ ತೆರಳುವವರು ಮಳೆಯಿಂದಾಗಿ ಪರದಾಡುವಂತಾಗಿದೆ. ಚಳಿ ಹಾಗೂ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಊಟಿಯಂತಾಗಿದೆ. ಕರ್ನಾಟಕ (Karnataka) ದಲ್ಲಿ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 27 ರವರೆಗೂ ಮಳೆ ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ಉತ್ತರ ಕನ್ನಡ (Uttara kannada) , ದಕ್ಷಿಣ ಕನ್ನಡ, ಬೆಳಗಾವಿ (Belagavi) , ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ (Chikkaballapura) , ಚಿಕ್ಕಮಗಳೂರು (Chikkamagaluru) , ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಹಗರುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದೆ ಹಾಗೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು (Tumkuru) ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುರುವಾರವೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಗುರುತಿಸಿದ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಆಗಲಿದೆ. ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಗಾಗ ಹಗುರ ಇಲ್ಲವೇ ತುಂತುರು ಮಳೆ ಬರಬಹುದು ಎಂದು ಅಂದಾಜಿಸಲಾಗಿದೆ. ಇದರ ಹೊರತು ಕರ್ನಾಟಕದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ. ಇದನ್ನೂ ಓದಿ : – ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗೆ ಸಹೋದರಿ ಪ್ರಿಯಾಂಕಾ ಗಾಂಧಿ ಸಾಥ್

ಬೆಂಗಳೂರಿನ HAL ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಂಪ್ಲಿ, ಮುನಿರಾಬಾದ್, ಹೊಸಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : – ಉಗ್ರ ಶಾರಿಕ್ ಗೆ ಇತ್ತ ಬೆಂಗಳೂರು ನಂಟು..?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!