ರಾಜ್ಯಸಭೆಗೆ ವಿಧಾನಸಭೆ ಸದಸ್ಯರ ಮೂಲಕ ನಡೆದ ಚುನಾವಣೆಯಲ್ಲಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.
ಬಿಜೆಪಿಯಿಂದ ಸ್ಪರ್ಧಿಸಿದ್ದ ನಿರ್ಮಲಾ ಸೀತಾರಾಮನ್ ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಜೈರಾಮ್ ರಮೇಶ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಾಲ್ಕನೇ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಹಾಗೂ ಕಾಂಗ್ರೆಸ್ ಮನ್ಸೂರ್ ಅಲಿ ಖಾನ್‌ಗೆ ಹಿನ್ನಡೆ ಉಂಟಾಗಿದೆ. ಇದನ್ನೂ ಓದಿ : – RS ELECTION – ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನ ಜೈರಾಂ ರಮೇಶ್ ಗೆ ಗೆಲುವು
ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ತಿಕ್ಕಾಟದಿಂದ ಬಿಜೆಪಿ ಇಬ್ಬರು ಅಭ್ಯರ್ಥಿಗಳು ಅನಾಯಾಸವಾಗಿ ಗೆದ್ದರೆ, ಒಂದು ಹೆಚ್ಚುವರಿ ಸ್ಥಾನವನ್ನು ಗಳಿಸುವಲ್ಲಿ ಬಿಜೆಪಿ ಸಫಲವಾಗಿದೆ. ನಾಲ್ಕನೇ ಸ್ಥಾನಕ್ಕೆ ಮೂವರಲ್ಲಿ ನಡೆದ ಸ್ಪರ್ಧೆಯಲ್ಲಿ ಅತಿಹೆಚ್ಚು ಮತ ಪಡೆಯುವ ಮೂಲಕ ಲೆಹರ್ ಸಿಂಗ್ ಗೆಲುವಿನ ನಗೆ ಬೀರಿದ್ದಾರೆ.
ಇದನ್ನೂ ಓದಿ : – ಹೆಚ್ ಡಿ ರೇವಣ್ಣ ಮತ ಸಿಂಧು – ಜೆಡಿಎಸ್ ನಾಯಕನಿಗೆ ಕ್ಲೀನ್ ಚಿಟ್