ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಸಿಡಿಯಲ್ಲಿದ್ದ ಯುವತಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತನಿಖೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ.
ಯುವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ಪೀಠ, ಎಸ್ ತನಿಖೆ ಪ್ರಗತಿ ಹಾಗೂ ತನಿಖೆ ರದ್ದುಗೊಳಿಸುವ ಕುರಿತು ಎಸ್ಐಟಿ, ರಾಜ್ಯ ಸರ್ಕಾರ, ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದೆ.
ಸಂತ್ರಸ್ತೆ ಯುವತಿ ಇವತ್ತು ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠಕ್ಕೆ ಅರ್ಜಿ ಸಲ್ಲಿಸಿದ್ದೆ ತಡ ಎಸ್ ಐಟಿ, ಸರ್ಕಾರ ಹಾಗೂ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದೆ.. ತನಿಖೆಯ ಪೂರ್ಣ ಅಂಶಗಳನ್ನು ನ್ಯಾಯಲಯಕ್ಕೆ ಸಲ್ಲಿಸಿ ಜೊತೆಗೆ ಆರೋಪಿಯನ್ನು ಯಾಕೆ ಇಲ್ಲಿಯವರೆಗೂ ಯಾಕೆ ಬಂಧನ ಮಾಡಿಲ್ಲ ಎಂದು ಪ್ರಶ್ನೆ ಮಾಡಿದೆ.
ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ತನಿಖೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ರಕ್ಷಿಸಲು ತನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ ಎನ್ನಲಾಗಿದೆ.