ಸಿಡಿ ಪ್ರಕರಣದಲ್ಲಿ ಬಂಧನ ಹಾಗೂ ವಿಚಾರಣೆಯ ಭೀತಿಯಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಚಿವ ಭೈರತಿ ಬಸವರಾಜ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಬಂದಿದೆಯಂತೆ. ಬೆಂಗಳೂರಿನಲ್ಲಿಯೇ ಇದ್ದಾರೆ ಎಂದರು.
ರಮೇಶ್, ಬಾಲಚಂದ್ರ ಜೊತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ. ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಬರುತ್ತಾರೆ. ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿದ್ದೇವೆ. ಇಂದು ನಾನು, ನಮ್ಮೆಲ್ಲ ನಾಯಕರು ಗೋಕಾಕ, ಅರಭಾವಿಗೆ ಹೋಗ್ತಿದೀವಿ. ಸಿಎಂ ಸೂಚನೆಯಂತೆ ಬೆಳಗಾವಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಅವರು ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಯ ಸಾಧಿಸುವಲ್ಲಿ ಸಂದೇಹ ಇಲ್ಲ. ಸುರೇಶ್ ಅಂಗಡಿ ಜನಪರ ಕಾರ್ಯಕ್ರಮ ಮುಂದಿಟ್ಟು ಮತಯಾಚನೆ ಮಾಡುತ್ತೇವೆ. ನರೇಂದ್ರ ಮೋದಿ ಜನಪರ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುತ್ತೇವೆ. ಬೆಳಗಾವಿ ನಗರ ಅಭಿವೃದ್ಧಿಗೆ ಇತ್ತೀಚೆಗೆ 150 ಕೋಟಿ ರೂ. ಕೊಟ್ಟಿದ್ದೇವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಿದ್ದರಾಮಯ್ಯ ಆಗ್ರಹಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ತಮ್ಮ ಪಕ್ಷದಲ್ಲಿ ಏನಾಗಿದೆ ಅದನ್ನು ನೋಡಿಕೊಳ್ಳಲಿ. ಕೋವಿಡ್ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅನೇಕ ಜನಪರ ಯೋಜನೆ ಕೊಟ್ಟಿದ್ದಾರೆ ಎಂದರು.
ಸಿಎಂ ರಾಜೀನಾಮೆ ನೀಡಲಿ ಇಲ್ಲ ಈಶ್ವರಪ್ಪ ವಜಾ ಮಾಡಲಿ ಎಂಬ ಡಿಕೆಶಿಗೆ ಆಗ್ರಹ ವಿಚಾರ. ಇದು ನಮ್ಮ ಆಂತರಿಕ ವಿಷಯ ಇದಕ್ಕೂ ಅವರಿಗೆ ಸಂಬಂಧ ಇಲ್ಲ. ನಾಳೆ ಬೆಳಗ್ಗೆಯೇ ಸಿಎಂ ಆಗುವ ಕನಸಿನಲ್ಲಿ ಅವರಿದ್ದಾರೆ ಎಂದು ಬೈರತಿ ಹೇಳಿದರು.