ಪುಷ್ಪಾ ಸೂಪರ್ ಹಿಟ್ ಆದ ಬೆನ್ನಲ್ಲೇ ಕನ್ನಡದ ನಟಿ ರಶ್ಮಿಕಾ ಮಂದಣ್ಣ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅವರ ಈಗಿನ ಸಂಭಾವನೆ ಕೇಳಿ ನಿರ್ಮಾಪಕರು ಬೆಚ್ಚಿಬಿದ್ದಿದ್ದಾರೆ.
ಹೌದು, ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ರಶ್ಮಿಕಾ ಮಂದಣ್ಣ 5 ವರ್ಷದಲ್ಲಿ ತೆಲುಗು, ತಮಿಳು ಹಾಗೂ ಬಾಲಿವುಡ್ ಗೆ ಜಿಗಿದು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ.
ಸಾಲು ಸಾಲು ಸಿನಿಮಾಗಳು ಹಿಟ್ ಆಗುತ್ತಿದ್ದಂತೆ ರಶ್ಮಿಕಾ ಮಂದಣ್ಣ ಕೂಡ ತಮ್ಮ ಸಂಭಾವನೆಯನ್ನು ಹಂತ ಹಂತವಾಗಿ ಹೆಚ್ಚಿಸಿಕೊಳ್ಳುತ್ತಲೇ ಬಂದಿದ್ದು, ಇದೀಗ ಪುಷ್ಪಾ ಚಿತ್ರದ ಮೊದಲ ಭಾಗ ಸೂಪರ್ ಡೂಪರ್ ಹಿಟ್ ಆಗುತ್ತಿದ್ದಂತೆ ಮತ್ತೆ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ.
ರಶ್ಮಿಕಾ ಪುಷ್ಪ ಪಾರ್ಟ್ 2 ಚಿತ್ರಕ್ಕಾಗಿಯೇ 2 ಕೋಟಿ ರೂ. ಸಂಭಾವನೆ ಪಡೆದಿದ್ದಾರಂತೆ. ಅಲ್ಲದೇ ಹೊಸ ಚಿತ್ರಗಳಿಗೂ ಇಷ್ಟೇ ಸಂಭಾವನೆ ಕೊಡುವಂತೆ ಕೇಳುತ್ತಿದ್ದಾರಂತೆ. ಇದರಿಂದ ಹೊಸ ನಿರ್ಮಾಪಕರು ಸಂಭಾವನೆ ಕೇಳಿ ಬೆಚ್ಚಿಬಿದ್ದಿದ್ದಾರಂತೆ.
ಮೂಲಗಳ ಪ್ರಕಾರ ಇತ್ತೀಚೆಗೆ ರಶ್ಮಿಕಾರನ್ನು ಗೀಪಾ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಮಹಿಳಾ ಪ್ರಧಾನ ಸಿನಿಮಾವೊಂದರಲ್ಲಿ ಆಫರ್ ನೀಡಿದೆಯಂತೆ .ಆದರೆ ರಶ್ಮಿಕಾ ಅವರಿಗೂ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರಂತೆ. ರಶ್ಮಿಕಾಗೆ ತೆಲುಗಿನಲ್ಲಿ ಹಿಟ್ ಸಿನಿಮಾ ಕೊಟ್ಟ ಗೀತಾ ಪಿಕ್ಚರ್ಸ್ ಸಂಸ್ಥೆಗೂ ರಶ್ಮಿಕಾ ವಿನಾಯಿತಿ ನೀಡಿಲ್ಲ ಎಂಬುದು ಹೊಸ ಸುದ್ದಿ.