ಟಿ-20 ವಿಶ್ವಕಪ್ ನಂತರ ರವಿಶಾಸ್ತ್ರಿ ಅವರ ಗುತ್ತಿಗೆ ಅವಧಿ ಪೂರ್ಣಗೊಳ್ಳಲಿದ್ದು, ಭಾರತ ತಂಡದ ನೂತನ ಕೋಚ್ ಸ್ಥಾನದ ಹುಡುಕಾಟ ಆರಂಭಿಸಿರುವ ಬಿಸಿಸಿಐ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಮತ್ತು ವಿವಿಎಸ್ ಲಕ್ಷ್ಮಣ್ ಮೇಲೆ ಒಲವು ತೋರಿದೆ.
ಈಗಾಗಲೇ ಭಾರತ ತಂಡದ ಟಿ-20 ತಂಡಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ್ದು, ವಿಶ್ವಕಪ್ ನಂತರ ಕೆಳಗಿಳಿಯಲಿದ್ದಾರೆ. ಇದೇ ವೇಳೆ ರವಿಶಾಸ್ತ್ರಿ ಅವರ ಅವಧಿ ಕೂಡ ಮುಗಿಯಲಿದ್ದು, ನೂತನ ಕೋಚ್ ಹುಡುಕಾಟದ ಪ್ರಕ್ರಿಯೆ ಆರಂಭವಾಗಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾಜಿ ಸಹದ್ಯೋಗಿಗಳಾದ ವಿವಿಎಸ್ ಲಕ್ಷ್ಮಣ್ ಮತ್ತು ಅನಿಲ್ ಕುಂಬ್ಳೆ ಅವರನ್ನು ಸಂಪರ್ಕಿಸಿದ್ದು ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅನಿಲ್ ಕುಂಬ್ಳೆ ಭಾರತ ತಂಡದ ಕೋಚ್ ಆಗಿದ್ದು, ನಾಯಕ ವಿರಾಟ್ ಕೊಹ್ಲಿ ಜೊತೆಗಿನ ಭಿನ್ನಾಭಿಪ್ರಾಯದಿಂದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದ ನಂತರ ರಾಜೀನಾಮೆ ನೀಡಿ ಹೊರಬಂದಿದ್ದರು.