ಸ್ಲಾಗ್ ಓವರ್ ನಲ್ಲಿ ರವೀಂದ್ರ ಜಡೇಜಾ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 160 ರನ್ ಗುರಿ ಒಡ್ಡಿದೆ.
ಮುಂಬೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಮಹೇಂದ್ರ ಸಿಂಗ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು.
ಹರ್ಷಲ್ ಪಟೇಲ್ ಅವರ ಕೊನೆಯ ಓವರ್ ನಲ್ಲಿ 5 ಸಿಕ್ಸರ್ ಮತ್ತು 1 ಬೌಂಡರಿ ಸೇರಿದಂತೆ 37 ರನ್ ಕೊಳ್ಳೆ ಹೊಡೆಯುವ ಮೂಲಕ ಜಡೇಜಾ ಹೊಸ ದಾಖಲೆ ಬರೆದರು. ಅಲ್ಲದೇ 28 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸೇರಿದ 62 ರನ್ ಬಾರಿಸಿ ಔಟಾಗದೇ ಉಳಿದರು.
ಚೆನ್ನೈ ತಂಡಕ್ಕೆ ರುತುರಾಜ್ ಗಾಯಕ್ವಾಡ್ ಮತ್ತು ಫಾಫ್ ಡು ಪ್ಲೆಸಿಸ್ ಮೊದಲ ವಿಕೆಟ್ ಗೆ 74 ರನ್ ಜೊತೆಯಾಟದ ಮೂಲಕ ಉತ್ತಮ ಆರಂಭ ನೀಡಿದರು. ಗಾಯಕ್ವಾಡ್ 25 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 33 ರನ್ ಬಾರಿಸಿ ಔಟಾದರು. ಫಾಫ್ ಡು ಪ್ಲೆಸಿಸ್ 41 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ ಬರೋಬ್ಬರಿ 50 ರನ್ ಬಾರಿಸಿ ಔಟಾದರು.
ಮಧ್ಯಮ ಕ್ರಮಾಂಕದಲ್ಲಿ ಸುರೇಶ್ ರೈನಾ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಾಯದಿಂದ 24 ರನ್ ಗಳಿಸಿದರೆ, ಅಂಬಟಿ ರಾಯುಡು (14) ತಂಡದ ಮೊತ್ತವನ್ನು ಉಬ್ಬಿಸಿದರು.