ಮಾತುಕತೆಗೆ ಸಿದ್ಧ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿಕೆ ನೀಡಿದ ಬೆನ್ನಲ್ಲೇ ಸೌಹಾರ್ದ ಮಾತುಕತೆಗೆ ಉಕ್ರೇನ್ ಅಧ್ಯಕ್ಷ ವೊಲೊಡೈಮರ್ ಜೆಲೆನ್ ಸ್ಕಿ ಆಹ್ವಾನಿಸಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿನ್ ಪಿಂಗ್ ಗೆ ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿ ನೀಡಿದ ವೇಳೆ ಉಕ್ರೇನ್ ಜೊತೆಗೆ ಮಾತುಕತೆಗೆ ಸಿದ್ಧ ಎಂದು ಘೋಷಣೆ ಮಾಡುತ್ತಿದ್ದಂತೆ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ಜೆಲೆನ್ ಸ್ಕಿ ಮಾತುಕತೆಗೆ ಅಧಿಕೃತ ಆಹ್ವಾನ ನೀಡಿದ್ದಾರೆ.
ರಷ್ಯಾ ಸೇನೆ ಈಗಾಗಲೇ ಉಕ್ರೇನ್ ರಾಜಧಾನಿ ಕ್ವೀವ್ ಅನ್ನು ಬಹುತೇಕ ವಶಪಡಿಸಿಕೊಂಡು ಮುನ್ನುಗ್ಗುತ್ತಿದ್ದಂತೆ ಉಕ್ರೇನ್ ಅಧ್ಯಕ್ಷ ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ವೊಂದರಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ.