ಕಾಂಗ್ರೆಸ್ ನ ಹಿರಿಯ ನಾಯಕ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ (Ghulam Nabi Azad ) ಕಾಂಗ್ರೆಸ್ ( congress ) ಪಕ್ಷದ ಹಲವು ಪ್ರಮುಖ ಸಮಿತಿಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಪಕ್ಷದ ಉನ್ನತ ನಾಯಕತ್ವದ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನವನ್ನು ಮತ್ತೆ ಹೊರಹಾಕಿದ್ದಾರೆ.
ಪಕ್ಷದ ನಾಯಕತ್ವ ಕಾರ್ಯನಿರ್ವಹಿಸುತ್ತಿರುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದ ಜಿ-23 ಸಮಿತಿಯಲ್ಲಿ ಗುಲಾಂ ನಬಿ ಆಜಾದ್ ಸಹ ಇದ್ದರು. ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ : – ಸಹಜ ಸ್ಥಿತಿಯತ್ತ ಶಿವಮೊಗ್ಗ- ಇಂದಿನಿಂದ ಶಾಲಾ-ಕಾಲೇಜು ಓಪನ್
ಈ ನೇಮಕಾತಿಯ ಬಗ್ಗೆ ಆಜಾದ್ ಅಸಮಾಧಾನ ಹೊಂದಿದ್ದರು. ಕಾಂಗ್ರೆಸ್ ನ ರಾಷ್ಟ್ರೀಯ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರಾಗಿದ್ದ ಅವರು ರಾಜ್ಯಮಟ್ಟದ ಸಮಿತಿಗೆ ನೇಮಿಸಿದ್ದನ್ನು ಹಿಂಬಡ್ತಿ ಎಂದೇ ಪರಿಗಣಸಿದ್ದರು. ತಮ್ಮ ರಾಜೀನಾಮೆಗೆ ಆರೋಗ್ಯದ ಕಾರಣಗಳನ್ನು ಆಜಾದ್ ಮುಂದಿಟ್ಟಿದ್ದಾರೆ. ಆದರೆ ಅವರ ರಾಜೀನಾಮೆಯ ನಿಜವಾದ ಕಾರಣಗಳು ಬೇರೆಯೇ ಇವೆ ಎಂದು ರಾಜಕೀಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ : – ಬಿಹಾರ ಸಂಪುಟ ಸಚಿವರಿಗೆ ಖಾತೆ ಹಂಚಿಕೆ- ಗೃಹ ಖಾತೆ ಉಳಿಸಿಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಗೆ ಆರೋಗ್ಯ, ರಸ್ತೆ