ಪಂಚಮಸಾಲಿ (pachammasalli) ಮೀಸಲಾತಿ ಹೋರಾಟದ ವಿಚಾರವಾಗಿ ಸಚಿವ ಸಿ.ಸಿ ಪಾಟೀಲ್ (C.C PATIL) ಮನೆಯಲ್ಲಿ ನಡೆದ ಸಂಧಾನ ಯಶಸ್ವಿಯಾಗಿದೆ. ಎರಡು ತಿಂಗಳ ಒಳಗಾಗಿ ಹಿಂದುಳಿದ ಆಯೋಗದ ವರದಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BASAVARAJ BOMMAI )ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಸದ್ಯ ಸಿಎಂ ಮನೆಯ ಮುಂದೆ ಧರಣಿ ಸತ್ಯಾಗ್ರಹ ಮುಂದೂಡಲಾಗಿದೆ.
ಆದರೆ ನಮ್ಮ ಹೋರಾಟ ನಿಲ್ಲಲ್ಲ.ಇನ್ನೂ ಕೆಲವು ತಾಲೂಕುಗಳಲ್ಲಿ ಸಂಚರಿಸಿ ಸಂಘಟನೆ ಮಾಡಲಾಗುವುದು. ಸಚಿವ ಸಿ.ಸಿ ಪಾಟೀಲ್ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (BASANA GOWDA PATIL YATHNAL) ಮೇಲೆ ನಂಬಿಕೆ ಇಟ್ಟು ಧರಣಿ ಮುಂದೂಡಲಾಗುವುದು ಎಂದು ಕೂಡಲ ಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.
ಸಿಎಂ ಮನೆಯ ಮುಂದೆ ಧರಣಿ ಕೂರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಸಚಿವ ಸಿ.ಸಿ ಪಾಟೀಲ್ ಮನೆಯಲ್ಲಿ ಪಂಚಮಸಾಲಿ ಸಮಾಜದ ಪ್ರಮುಖರ ಸಭೆ ನಡೆಯಿತು. ಇದನ್ನೂ ಓದಿ : – ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳದ ಶಾಕ್ – ಮುಂದಿನ ವರ್ಷದಿಂದ ಏಕರೂಪದ CET ನಡೆಸಲು ಚಿಂತನೆ
ಸಭೆ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ತೆರಳಿದ ಸಚಿವ ಸಿಸಿ ಪಾಟೀಲ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಕೆಲವು ಸಮಯ ಕಾಲ ಚರ್ಚೆ ನಡೆಸಿದರು. ಸಿಎಂ ಜೊತೆ ಮಾತುಕತೆ ನಡೆಸಿದ ಸಚಿವ ಸಿ.ಸಿ ಪಾಟೀಲ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಎರಡು ತಿಂಗಳ ಕಾಲಾವಧಿ ಕೇಳಿದ ಬಸವರಾಜ ಬೊಮ್ಮಾಯಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯಲಾಗಿದೆ. ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ, ಸಿದ್ದು ಸವದಿ, ಜಯ ಮೃತ್ಯುಂಜಯ ಸ್ವಾಮೀಜಿ, ಮಾಜಿ ಶಾಸಕ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಎಂಪಿ ನಾಡಗೌಡ ಮತ್ತಿತರರು ಭಾಗಿಯಾಗಿದ್ದರು.
ಇದನ್ನೂ ಓದಿ : – ಫೇಸ್ ಬುಕ್ – ಇನ್ ಸ್ಟಾಗ್ರಾಮ್ ಗಳಲ್ಲಿ ಹಣ ಸಂಪಾದಿಸಿ – ಜುಕರ್ ಬರ್ಗ್