ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4.01 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾದರೆ, ಇದೇ ಮೊದಲ ಬಾರಿ 4 ಸಾವಿರಕ್ಕೂ ಅಧಿಕ (4187) ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2.14 ಕೋಟಿಗೆ ಏರಿಕೆಯಾದರೆ, ಸಾವಿನ ಸಂಖ್ಯೆ 2.34 ಲಕ್ಷಕ್ಕೆ ಜಿಗಿದಿದೆ. 37,23,446 ಸಕ್ರಿಯ ಪ್ರಕರಣಗಳಿವೆ.