ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಕೊಲೆ ಪ್ರಕರಣದ ಮೂವರು ಆರೋಪಿಗಳಾದ ಅಜಯ್, ಸ್ಟೀಫನ್ ಮತ್ತು ಪುರುಷೋತ್ತಮ್ ಗೆ 14 ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಿ ಬೆಂಗಳೂರಿನ 31ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಶುಕ್ರವಾರ ಬಂಧಿಸಲಾಗಿದ್ದ ಮೂವರು ಆರೋಪಿಗಳನ್ನು ಶನಿವಾರ ಬೆಳಿಗ್ಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಉಳಿದ ಇಬ್ಬರು ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಗುಂಡೇಟಿನಿಂದ ಗಾಯಗೊಂಡಿದ್ದು, ಬೆಂಗಳೂರಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಗುಣರಾದ ನಂತರ ನ್ಯಾಯಾಲಯದ ಮುಂದೆ ಹಾಜರಪಡಿಸಲಾಗುವುದು.