ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಮಾಡಿದ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಅರೆಸ್ಟ್ ಮಾಡುವ ಸಮಯದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಪೀಟರ್ ಮತ್ತು ಸೂರ್ಯ ಅವರ ಮೇಲೆ ಇನ್ ಸ್ಪೆಕ್ಟರ್ ಶಿವಸ್ವಾಮಿ ಮತ್ತು ಕಾಟನ್ ಪೇಟೆ ಇನ್ ಸ್ಪೆಕ್ಟರ್ ಚಿದಾನಂದ್ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಗಿರುವ ಬಗ್ಗೆ ಸುಳಿವು ಪಡೆದ ಪೊಲೀಸರು ಬಂಧಿಸಲು ತೆರಳಿದಾಗ ಪಿಎಸ್ ಐ ಹಾಗೂ ಕಾನ್ ಸ್ಟೇಬಲ್ ಮೆಲೆ ಹಲ್ಲೆ ಮಾಡಿದ್ದರು. ಹಲ್ಲೆ ವೇಳೆ ಅತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.
ಗಾಯಗೊಂಡಿರುವ ಪೀಟರ್ ಮತ್ತು ಸೂರ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ