ಛಲವಾದಿ ಪಾಳ್ಯದ ಮಾಜಿ ಕಾರ್ಪೊರೇಟ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಬೆಳಗ್ಗೆ ನಗರ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ ಈ ಹಿಂದೆ ಅವರ ಪತಿಯನ್ನು ಇದೇ ರೀತಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಈಗಲೂ ಅದೇ ರೀತಿ ಅವರ ಪತ್ನಿಯನ್ನು ಹತ್ಯೆ ಮಾಡಲಾಗಿದೆ ಎಂದರು.
ಇನ್ನು 24ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿ ಬಿಗಿಯಾದ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣ ಸಂವಂಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.