ದಾವೋಸ್ ನಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿ ಜೊತೆ ರಾಜ್ಯ ಸರ್ಕಾರ 50,000 ಕೋಟಿ ರೂಪಾಯಿ ಹೂಡಿಕೆಯ ಒಪ್ಪಂದ..!

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು.

ಈ ಕಂಪನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿ ಇ ಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ಇದನ್ನೂ ಓದಿ :- ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ವಜಾ – ಭ್ರಷ್ಟಾಚಾರ ಆರೋಪದ ಮೇಲೆ ಬಂಧನ

ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ರು. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಇದನ್ನೂ ಓದಿ :-  ಸ್ಕ್ರಿಪ್ಟ್ ಬರೆಯೋರೇ ಬೇರೆ…ನಾಗೇಶ್ ಅವರದ್ದು ಕೇವಲ ನಟನೆ ಮಾತ್ರ – ಜಿ.ಪರಮೇಶ್ವರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!