ಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

ಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ (Purushotam kanagal) ಅಮೆರಿಕಾದ (America) ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು.

ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ (Prabhakar shastri) ಅವರ ಪುತ್ರ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ (Puttanna kanagal) ಅವರ ಅಣ್ಣನ ಮಗ. ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತರಚನೆ ಮಾಡಿದ್ದಾರೆ. ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್ ನ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ : – ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿ – ಕಾಂಗ್ರೆಸ್ ಗೆ ಶಾಸಕ ಬಂಡೆಪ್ಪ ಕಾಶೆಂಪೂರ್ ಮನವಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!