ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜಹೊರಟ್ಟಿ(BASAVARAJ HORATTI ) ರಾಜೀನಾಮೆ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದರು.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ ಹೊರಟ್ಟಿ ನಾಳೆ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಸಚಿವಾಲಯದ ಆಡಳಿತದಲ್ಲಿ ಪ್ರಾಮಾಣಿಕ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇನೆ. ಕಲುಷಿತವಾದ ರಾಜಕಾರಣದಲ್ಲಿ ನಮ್ಮಂತವರಿಗೆ ನೋವು ಆಗಿದೆ. ಆದರೆ ಮನಸ್ಸು ಇಲ್ಲದೆ ಇದ್ದರೂ ರಾಜಕೀಯದಲ್ಲಿ ಇರಬೇಕಾಗುತ್ತೆ ಎಂದರು. ಬಿಜೆಪಿ ಸೇರ್ಪಡೆ ಸಂಬಂಧಿಸಿದಂತೆ ಯಾವುದೇ ಷರತ್ತು ಹಾಕಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಭೇಟಿ ಸಂದರ್ಭದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯ ರಾಜಕೀಯ ನಿಲುವಿನ ಬಗ್ಗೆ ಆಕ್ಷೇಪ ಇಲ್ಲ.
ನನಗೆ ಎಲ್ಲ ಪಕ್ಷದವರು ಸಹಕಾರ ಕೊಟ್ಟಿದ್ದಾರೆ. 1980ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜಕೀಯ ಪ್ರವೇಶ ಮಾಡಿದೆ. 1986 ಜನತಾದಳ, ಲೋಕ ಶಕ್ತಿಯಲ್ಲಿ ಇದ್ದೆ. 2000ದಿಂದ ಇಲ್ಲಿಯವರೆಗೆ ಜೆಡಿಎಸ್ನಲ್ಲಿ ಇದ್ದೆ. ಜೆಡಿಎಸ್ ನಲ್ಲಿ ಕುಟುಂಬ ಸದಸ್ಯರ ತರ ನೋಡಿಕೊಂಡರು ಎಂದರು.ಭಾರತದಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಪ್ರಬುದ್ಧ ರಾಜಕಾರಣಿ. ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು, ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಏನು ಕಾರಣ ಎಂಬ ಪ್ರಶ್ನೆಗೆ, ಆತ್ಮೀಯರು ಸಾಕಷ್ಟು ಒತ್ತಾಯ ಮಾಡಿದರು, ಆಕಸ್ಮಿಕವಾಗಿ ಕೆಲವು ಬದಲಾವಣೆ ಅಗತ್ಯ ಎಂದು ಹೇಳಿದರು. ಇದನ್ನೂ ಓದಿ : – ಬುದ್ದ ಪೌರ್ಣಮಿ ಹಿನ್ನಲೆ – ನೇಪಾಳದ ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ
ಕೆಲವೊಮ್ಮೆ ಆಕಸ್ಮಿಕವಾಗಿ ಬದಲಾವಣೆಗಳು ಆಗುತ್ತಿರುತ್ತವೆ. ಕೆಲವು ಸಾರಿ ಈ ರೀತಿಯ ಬದಲಾವಣೆ ಅನಿವಾರ್ಯ ಆಗಿತ್ತು. ಅದಕ್ಕಾಗಿ ನಾನು ಈ ನಿರ್ಧಾರ ಮಾಡಿದ್ದೇನೆ ಎಂದು ಜೆಡಿಎಸ್ ತೊರೆಯುವ ನಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು. ನನ್ನ ಸೇರ್ಪಡೆಯಿಂದ ಬಿಜೆಪಿಯಲ್ಲಿ ವಿರೋಧ ಇಲ್ಲ. ಆದರೆ, ಒಬ್ಬರನ್ನು ಬಿಟ್ಟು ಬೇರೆ ಯಾರಿಗೂ ವಿರೋಧ ಇಲ್ಲ ಎಂದು ಪರೋಕ್ಷವಾಗಿ ಮೋಹನ್ ಲಿಂಬೀಕಾಯಿ ವಿರುದ್ಧ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ : – ಕೋವಿಡ್ ಕಂಟ್ರೋಲ್ – ಶಾಂಘೈನ ಹಲವೆಡೆ ಲಾಕ್ ಡೌನ್ ತೆರವು