ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ತಂಡದ ಒಬ್ಬ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇಂಗ್ಲೆಂಡ್ ನಲ್ಲಿ ನಡೆಯಲಿರುವ ಅಭ್ಯಾಸ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಇಂಗ್ಲೆಂಡ್ ಪ್ರವಾಸದಲ್ಲಿರುವ ರಿಷಭ್ ಪಂತ್ ಅವರನ್ನು 8 ದಿನಗಳ ಹಿಂದೆ ಪರೀಕ್ಷೆಗೊಳಪಡಿಸಿದಾಗ ಕೊರೊನಾ ಲಕ್ಷಣಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅಭ್ಯಾಸ ಪಂದ್ಯಕ್ಕಾಗಿ ಡುಹ್ರಾಮ್ ಗೆ ಭಾರತ ತಂಡದ ಜೊತೆ ಪ್ರಯಾಣ ಬೆಳೆಸುತ್ತಿಲ್ಲ.
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲಿದ್ದು, ಇದಕ್ಕೂ ಮುನ್ನ ನಡೆಯುವ ಅಭ್ಯಾಸ ಪಂದ್ಯ ಭಾರತದ ಆಟಗಾರರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
ಮೇ 13ರಂದು ರಿಷಭ್ ಪಂತ್ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರು. ಇತ್ತೀಚೆಗಷ್ಟೇ ಭಾರತೀಯ ಆಟಗಾರರು ಎರಡನೇ ಡೋಜ್ ಪಡೆದಿದ್ದು, ಇದಕ್ಕೂ ಮುನ್ನವೇ ರಿಷಭ್ ಗೆ ಸೋಂಕು ದೃಢಪಟ್ಟಿದ್ದು, ಕ್ವಾರಂಟೈನ್ ಗೆ ಒಳಗಾಗಿದ್ದಾರೆ.