ಬ್ರಿಟನ್ ನೂತನ ಪ್ರಧಾನಿಯಾಗಿ ಭಾರತ ಮೂಲದ ರಿಷಿ ಸುನಕ್ (Rishi Sunak) ಆಯ್ಕೆಯಾಗಿದ್ದಾರೆ. ಕೊನೆ ಗಳಿಗೆಯಲ್ಲಿ ಪೆನ್ನಿ ಮೊರ್ಡಾಂಟ್ ರೇಸ್ನಿಂದ ಹಿಂದೆ ಸರಿದಿದ್ದು, ಯಾವುದೇ ಪ್ರತಿಸ್ಪರ್ಧಿಗಳಿಲ್ಲದೆ ರಿಷಿ ಆಯ್ಕೆ ಆಗಿದ್ದಾರೆ. ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಿಂದೆ ಸರಿದಾಗಲೇ ರಿಷಿ ಪ್ರಧಾನಿ ಪಟ್ಟಕ್ಕೇರುವುದು ಬಹುತೇಕ ಖಚಿತವಾಗಿತ್ತು. ತಿಂಗಳುಗಳ ಹಿಂದೆಯಷ್ಟೇ ನಡೆದ ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ರಿಷಿ ಸುನಕ್, ಲಿಜ್ ಟ್ರಸ್ (Liz Truss) ವಿರುದ್ಧ ಪರಾಭವಗೊಂಡಿದ್ದರು. ಲಿಜ್ ಟ್ರಸ್ ಪ್ರಧಾನಿ ಹುದ್ದೆಗೇರಿದರೂ ಆರ್ಥಿಕ ಬಿಕ್ಕಟ್ಟು ಮತ್ತು ಸರ್ಕಾರದ ನೀತಿಯಿಂದಾಗಿ ಹಿನ್ನಡೆ ಅನುಭವಿಸಿ ಅಧಿಕಾರಕ್ಕೇರಿದ 45 ದಿನಗಳಲ್ಲಿ ರಾಜೀನಾಮೆ ಕೊಟ್ಟು ಹೊರನಡೆದಿದ್ದರು .ಲಿಜ್ ಟ್ರಸ್ ಹೊರ ನಡೆದ ನಂತರ ನೂತನ ಪ್ರಧಾನಿ ಆಯ್ಕೆಗೆ ಸಿದ್ಧತೆ ನಡೆದಿದ್ದು, ರಿಷಿ ಮತ್ತೊಮ್ಮೆ ಚುನಾವಣಾ ಕಣಕ್ಕಿಳಿಯುವುಗಾಗಿ ಘೋಷಿಸಿದ್ದರು. ಇತ್ತ ಪೆನ್ನಿ ಮೊರ್ಡಾಂಟ್ ಒಬ್ಬರೇ ಸುನಕ್ ಅವರ ಪ್ರತಿಸ್ಪರ್ಧಿಯಾಗಿದ್ದರು. ರಿಷಿ ಸುನಕ್ ಅವರಿಗೆ 180ಕ್ಕೂ ಹೆಚ್ಚು ಸಂಸದರ ಬೆಂಬಲ ಸಿಕ್ಕಿದೆ. ಪೆನ್ನಿ ಮೊರ್ಡಾಂಟ್ ಅವರಿಗೆ ಇಲ್ಲಿಯವರೆಗೆ ಕೇವಲ 26 ಟೋರಿ ಸಂಸದರ ಬೆಂಬಲ ಸಿಕ್ಕಿದೆ.
ರಿಷಿ ಸುನಕ್ ಅವರು ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಪತಿ. ಇವರಿಗೆ ಕೃಷ್ಣ ಮತ್ತು ಅನೌಷ್ಕಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಬೋರಿಸ್ ಜಾನ್ಸನ್ ಅವರ ನೇತೃತ್ವದಲ್ಲಿ ಹಣಕಾಸು ಸಚಿವರಾಗಿದ್ದರು. ರಿಷಿ ಸುನಕ್ ಅವರ ಅಜ್ಜ ಅಜ್ಜಿ ಪಂಜಾಬ್ ಮೂಲದವರು. ಅವರ ತಂದೆ ತಾಯಿಯರಿಬ್ಬರೂ ಭಾರತೀಯ ಮೂಲದವರು. ಸುನಕ್ ಅವರ ಪೋಷಕರು ಫಾರ್ಮಸಿಸ್ಟ್ ಆಗಿದ್ದು 1960 ರ ದಶಕದಲ್ಲಿ ಪೂರ್ವ ಆಫ್ರಿಕಾದಿಂದ ಯುಕೆಗೆ ವಲಸೆ ಬಂದಿದ್ದರು.
ಇದನ್ನೂ ಓದಿ – ಬಾಹ್ಯಾಕಾಶದಲ್ಲಿ ನಡೆದಿದೆ ಬೃಹತ್ ಸ್ಫೋಟ- ಭೂಮಿಯಲ್ಲೂ ಅನುಭವಕ್ಕೆ ಬಂದ ಆಘಾತ ತರಂಗ- ನಾ
ರಿಷಿ ಮುಂದಿರುವ ಸವಾಲು ಏನು ಗೊತ್ತಾ..?
ಬ್ರಿಟನ್ ಆರ್ಥಿಕ ಪರಿಸ್ಥಿತಿ ಕ್ಷೀಣಿಸುತ್ತಿದೆ. ಹೀಗಾಗಿ ನ್ಸರ್ವೇಟಿವ್ ಪಕ್ಷದ ಅಭ್ಯರ್ಥಿ ಲಿಜ್ ಟ್ರಸ್ ಅಧಿಕಾರಕ್ಕೆ ಬಂದಿದ್ದರು. ಹೀಗಾಗಿ ಪ್ರಧಾನಿ ಪಟ್ಟದ ಜವಾಬ್ದಾರಿ ಇವರಿಗೆ ಸುಲಭದ ಹಾದಿಯಾಗಿರಲಿಲ್ಲ. ಇನ್ನು ಆರ್ಥಿಕ ಸುಧಾರಣೆ ಸಾಧ್ಯವಾಗದ ಕಾರಣ ಲಿಜ್ ಟ್ರಸ್ ರಾಜೀನಾಮೆ ನೀಡಬೇಕಾಯಿತು. ಇದೀಗ ಹೊಸದಾಗಿ ಆಯ್ಕೆಯಾಗಿರುವ ರಿಷಿ ಸುನಕ್ ಮುಂದೆ ಕೂಡ ಬಹುದೊಡ್ಡ ಸವಾಲುಗಳು ಇವೆ.