ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಹಾಗೂ ಮಾಜಿ ಕೇಂದ್ರ ಸಚಿವ ಅಜಿತ್ ಸಿಂಗ್ ಕೋವಿಡ್-19ಗೆ ಬಲಿಯಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಉತ್ತರ ಪ್ರದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಅಜಿತ್ ಸಿಂಗ್, ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 20ರಂದು ಕೊರೊನಾ ವೈರಸ್ ಪಾಸಿಟಿವ್ ವರದಿ ಬಂದಿತ್ತು.
ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಕಂಡು ಬಂದಿದ್ದರಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಜಿತ್ ಸಿಂಗ್ ಇಂದು ಬೆಳಿಗ್ಗೆ 8.20ರ ಸುಮಾರಿಗೆ ವಿಧಿವಶರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಅಜಿತ್ ಸಿಂಗ್ ಎಂದೇ ಹೆಸರಾಗಿದ್ದ ಚೌಧರಿ ಅಜಿತ್ ಸಿಂಗ್ 8 ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ನಾಲ್ಕು ಬಾರಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.