ರೋಡ್ ರೇಜ್ ಪ್ರಕರಣ – ಪಟಿಯಾಲ ಕೋರ್ಟ್ ನಲ್ಲಿ ಶರಣಾದ ನವಜೋತ್ ಸಿಂಗ್ ಸಿಧು

1988ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷದ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು (navjoth singh sidhu ) ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ನವತೇಜ್ ಸಿಂಗ್ ಚೀಮಾ ಸೇರಿದಂತೆ ಕೆಲವು ಪಕ್ಷದ ನಾಯಕರೊಂದಿಗೆ ಇಂದು ಮಧ್ಯಾಹ್ನ ಪಟಿಯಾಲ ಜಿಲ್ಲಾ ನ್ಯಾಯಾಲಯಕ್ಕೆ ತೆರಳಿ ಸಿಧು ಶರಣಾದರು. ಚೀಮಾ ಅವರು ಸಿಧುವನ್ನು ಕಾರಿನಲ್ಲಿ ಕೋರ್ಟ್ ಗೆ ಕರೆತಂದರು. ನಂತರ ವೈದ್ಯಕೀಯ ಪರೀಕ್ಷೆಗಾಗಿ ಪಟಿಯಾಲದ ಮಾತಾ ಕೌಶಲ್ಯ ಆಸ್ಪತ್ರೆಗೆ ಸಿಧು ತೆರಳಿದರು. ಪಟಿಯಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುವ ಸಾಧ್ಯತೆಯಿದೆ. ಇದನ್ನೂ ಓದಿ :- ಗಣಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಸುಪ್ರೀಂಕೋರ್ಟ್ ..!

ಇದಕ್ಕೂ ಮುನ್ನ ನ್ಯಾಯಾಲಯಕ್ಕೆ ಶರಣಾಗಲು ಕೆಲವು ವಾರ ಕಾಲಾವಕಾಶ ನೀಡುವಂತೆ ಸಿಧು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಮನವಿಯನ್ನು ತಿರಸ್ಕರಿಸಿತು. ಅಪರಾಧಿಗೆ ಶಿಕ್ಷೆ ವಿಧಿಸುವಾಗ ತೋರುವ ಯಾವುದೇ ಅನುಚಿತ ಸಹಾನುಭೂತಿಯು ನ್ಯಾಯ ವ್ಯವಸ್ಥೆಗೆ ಹೆಚ್ಚು ಹಾನಿ ಮಾಡುತ್ತದೆ ಮತ್ತು ಕಾನೂನಿನ ಪರಿಣಾಮಕತ್ವದ ಬಗ್ಗೆ ಸಾರ್ವಜನಿಕ ವಿಶ್ವಾಸವನ್ನು ದುರ್ಬಲಗೊಳಿಸುತ್ತದೆ ಎಂದು ಗುರುವಾರ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿತ್ತು. ಇದನ್ನೂ ಓದಿ :-  ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ- ಮುಂಬೈನಲ್ಲಿ ತುರ್ತು ಭೂಸ್ಪರ್ಶ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!