ಕೆಜಿಎಫ್-2 (KGF- 2) ಚಿತ್ರ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ಈ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಕ್ಷೇತ್ರ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
ನಟ ಇಂದು ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದನ್ನು ಓದಿ : – RCB ತಂಡದ ಜೊತೆ ಕೈ ಜೋಡಿಸಿದ ಹೊಂಬಾಳೆ ಫಿಲಂಸ್
ಧರ್ಮಸ್ಥಳಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ಕುಕ್ಕೆಗೆ ತೆರಳಿದ್ದಾರೆ. ಕುಕ್ಕೆಯಲ್ಲಿ ದೇವರ ದರ್ಶನ ಪಡೆದು ನಂತರ ಧರ್ಮಸ್ಥಳಕ್ಕೆ ಬಂದು ಮೊದಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಇದನ್ನು ಓದಿ : – ಗ್ರೀಸ್ ನಲ್ಲಿ ಚಿತ್ರ ಬಿಡುಗಡೆ ಮಾಡಿ ದಾಖಲೆ ಬರೆಯಲಿರುವ ಕೆಜಿಎಫ್ – 2