ಆಡಳಿತ ಮೇಲುಗೈಗಾಗಿ ನಡೆದ ಜಟಾಪಟಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ಎತ್ತಂಗಡಿ ಮಾಡಲಾಗಿದೆ.
ಇಬ್ಬರೂ ಐಎಎಸ್ ಅಧಿಕಾರಿಗಳಾಗಿದ್ದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ನಡುವೆ ಜಟಾಪಟಿ ನಡೆದಿದ್ದು, ಇಬ್ಬರನ್ನು ಎತ್ತಂಗಡಿ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕಗೊಂಡಿದ್ದರೆ, ಪಾಲಿಕೆ ಆಯುಕ್ತರಾಗಿ ಲಕ್ಷ್ಮಿಕಾಂತ ರೆಡ್ಡಿ ನೇಮಕವಾಗಿದ್ದಾರೆ.
ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿದ್ದ ಡಾ.ಬಗಾದಿ ಗೌತಮ್, ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರ ಪತಿ ಆಗಿದ್ದಾರೆ. ಈ ಮೂಲಕ ದಂಪತಿ ಅಕ್ಕಪಕ್ಕದ ಜಿಲ್ಲೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಲಭಿಸಿದಂತಾಗಿದೆ. ಲಕ್ಷ್ಮೀಕಾಂತ ರೆಡ್ಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ನಿಯೋಜನೆ ಮಾಡಲಾಗಿದೆ. ಶಿಲ್ಪಾ ನಾಗ್ ಅವರಿಗೆ ಯಾವುದೇ ಜವಾಬ್ದಾರಿ ನೀಡಲಾಗಿಲ್ಲ.