ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಗುರುವಾರ ಆರಂಭಗೊಂಡ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡ, ಪ್ರವಾಸಿ ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿದೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ಶಾರ್ದೂಲ್ ಠಾಕೂರ್ ಬದಲು ಮಧ್ಯಮ ವೇಗಿ ಇಶಾಂತ್ ಶರ್ಮ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ಇಂಗ್ಲೆಂಡ್ ತಂಡದಲ್ಲಿ ಮಾರ್ಕ್ ವುಡ್, ಓಲಿ ರಾಬಿನ್ಸನ್, ಸ್ಯಾಮ್ ಕುರಿಯನ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮೂರು ಬದಲಾವಣೆ ಮಾಡಲಾಗಿದೆ.
ಭಾರತದ ಪರ ಬ್ಯಾಟಿಂಗ್ ಗೆ ಇಳಿದ ರೋಹಿತ್ ಶರ್ಮ ಮತ್ತು ಕೆ.ಎಲ್. ರಾಹುಲ್ ಎಚ್ಚರಿಕೆಯಿಂದ ಇನಿಂಗ್ಸ್ ಆರಂಭಿಸಿದ್ದು, 10 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 10 ರನ್ ಗಳಿಸಿತ್ತು.