ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲುಂಡರೂ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವೃತ್ತಿಜೀವನದಲ್ಲೇ ಮೊದಲ ಬಾರಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಬುಧವಾರ ಬಿಡುಗಡೆಯಾದ ನೂತನ ಟೆಸ್ಟ್ ರ್ಯಾಂಕಿಂಗ್ ವಿಭಾಗದ ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮ ರಿಷಭ್ ಪಂತ್ ಅವರನ್ನು ಹಿಂದಿಕ್ಕಿ 4ನೇ ಸ್ಥಾನ ಪಡೆದಿದ್ದಾರೆ. ಆದರೆ ರವೀಂದ್ರ ಜಡೇಜಾ ಆಲ್ ರೌಂಡರ್ ವಿಭಾಗದಲ್ಲಿ ಅಗ್ರಸ್ಥಾನದಿಂದ ಜಾರಿ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.
ರೋಹಿತ್ ಶರ್ಮ ಟೆಸ್ಟ್ ನ ಎರಡೂ ಇನಿಂಗ್ಸ್ ಗಳಲ್ಲಿ 34 ಮತ್ತು 30 ರನ್ ಗಳಿಸಿದ್ದರು. ಒಟ್ಟಾರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ 12 ಪಂದ್ಯಗಳಲ್ಲಿ 1094 ರನ್ ಗಳಿಸಿದ್ದಾರೆ. ಉಪ ನಾಯಕ ಅಜಿಂಕ್ಯ ರಹಾನೆ (1159) ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದ್ದಾರೆ.