ಕಾಂಗ್ರೆಸ್ (CONGRESS )ಸರ್ಕಾರ ಅಧಿಕಾರಕ್ಕೆ ಬಂದರೆ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣ ನೀಡುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ರು.
'ನಾ ನಾಯಕಿ' ಸಮಾವೇಶ, ಅರಮನೆ ಮೈದಾನ, ಬೆಂಗಳೂರು https://t.co/aOmcGzOtgx
— Karnataka Congress (@INCKarnataka) January 16, 2023
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಜ್ಯ ಕಾಂಗ್ರೆಸ್ ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ವೇದಿಕೆ ಮೇಲೆ ಗೃಹ ಲಕ್ಷ್ಮಿ ಬಾಂಡ್ ಅನ್ನು ಪ್ರಿಯಾಂಕಾ ಗಾಂಧಿ ಪ್ರದರ್ಶಿಸಿದರು. ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣ ಕೊಡುವುದಾಗಿ ಘೋಷಣೆ ಮಾಡಿ, ಪಕ್ಷದ ವತಿಯಿಂದ ಮಾದರಿ ಚೆಕ್ ಪ್ರದರ್ಶನ ಮಾಡಿದರು. ಈ ವೇಳೆ ವೇದಿಕೆ ಮೇಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಚೆಕ್ ಗೆ ಸಹಿ ಹಾಕಿದರು. ಇದನ್ನು ಓದಿ :- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮತ್ತೆ ಹೆಚ್ಚಳ – ಮಾಜಿ ಸಿಎಂ ಸಿದ್ದರಾಮಯ್ಯ
ಮಹಿಳೆಯರ ಶಕ್ತಿ, ದೇಶದ ಶಕ್ತಿ
ಮಹಿಳೆಯರ ಅಭಿವೃದ್ದಿ, ದೇಶದ ಅಭಿವೃದ್ಧಿ.ದೇಶದ ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಹತ್ತು ಹಲವಾರು ಯೋಜನೆಗಳನ್ನು ನೀಡಿದೆ. ಮುಂದೆಯೂ ಮಹಿಳೆಯರ ಪ್ರಗತಿಗೆ ಬದ್ಧವಾಗಿದೆ.
ಇಂದಿನ 'ನಾ ನಾಯಕಿ' ಕಾರ್ಯಕ್ರಮವು ಇದಕ್ಕೆ ಮುನ್ನುಡಿಯಾಗಲಿದೆ.#NaNayakiConvention #NaNayaki pic.twitter.com/tEk9bcgvCI
— Karnataka Congress (@INCKarnataka) January 16, 2023
ಕಾಂಗ್ರೆಸ್ ಸರ್ಕಾರ ಬಂದರೆ ಹೀಗೆ ಸಹಿ ಹಾಕಿ ಚೆಕ್ ಕೊಡುತ್ತೇವೆ ಎಂದು ಬೃಹತ್ ಚೆಕ್ ಪ್ರದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬೆಲೆ ಏರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಿಣಿಗೆ ಪ್ರತಿ ತಿಂಗಳು 72,000 ಆರ್ಥಿಕ ನೆರವು ನೀಡುತ್ತೇವೆ. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರದಿಂದ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ಮಹಿಳೆಯರಿಗೆ ಅಭಿಪ್ರಾಯ ಹಂಚಿಕೊಳ್ಳುವಂತೆ ಕರೆ ನೀಡಿದ್ದರು.
ಕಾಂಗ್ರೆಸ್ ಗ್ಯಾರಂಟಿ ನಂ.02
'ಗೃಹಲಕ್ಷ್ಮಿ' ಯೋಜನೆ
ರಾಜ್ಯದ ಎಲ್ಲಾ ಗೃಹಿಣಿಯರಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ!
ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ,
ನಿಮ್ಮ ಮನೆ ನಿರ್ವಹಣೆ
ಇನ್ಮುಂದೆ ಕಾಂಗ್ರೆಸ್ ಹೊಣೆ!#CongressGuarantee pic.twitter.com/5C2yGbkz8s— Karnataka Congress (@INCKarnataka) January 16, 2023
ಈ ಕರೆಗೆ ಸ್ಪಂದಿಸಿ ಸಾಮಾಜಿಕ ಜಾಲತಾಣ, ಇ ಮೇಲ್, ವಾಟ್ಸಪ್ ಹಾಗೂ ಪಕ್ಷದ ಕಚೇರಿಗೆ ಪತ್ರದ ರೂಪದಲ್ಲಿ ಸಾವಿರಾರು ಸಲಹೆಗಳು ಸ್ವೀಕಾರವಾಗಿವೆ. ಇದರಲ್ಲಿ ಬಹುತೇಕ ಮಹಿಳೆಯರು ಬೆಲೆ ಏರಿಕ ಸಮಸ್ಯೆಗೆ ಕಾಂಗ್ರೆಸ್ ಪಕ್ಷದಿಂದ ಪರಿಹಾರ ನಿರೀಕ್ಷಿಸುತ್ತಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಮನೆಯಲ್ಲಿ ದುಡಿಯುವವರ ವೇತನ ಸಾಲದೇ ಸಂಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು. ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 12,000ರಂತೆ ವರ್ಷಕ್ಕೆ 224 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಿಣಿಯರಿಗೆ ನೆರವಾಗಲಿದೆ ಎಂದು ಭರವಸೆ ನೀಡಿದರು.
ಇದನ್ನು ಓದಿ :- OPS ಜಾರಿ ಮಾಡುವಂತೆ ಪ್ರಿಯಾಂಕಾ ಗಾಂಧಿಗೆ NPS ನೌಕರರ ಸಂಘ ಮನವಿ…