ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಪರಿಹಾರ ಲಭಿಸಲಿದೆ ಎಂದಿದ್ದಾರೆ.
ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಅನೇಕ ಕುಟುಂಬಗಳು ಕಷ್ಟಪಡುತ್ತಿವೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತವರಿಗೆ ಪರಿಹಾರ ನೀಡಲಾಗುವುದು ಎಂದು ಅವರು ವಿವರಿಸಿದರು.
ಒಂದು ಕುಟುಂಬದಲ್ಲಿ ಕೊವಿಡ್ ನಿಂದ ಸತ್ತರೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಇದರಿಂದ ರಾಜ್ಯದ 20ರಿಂದ 30 ಸಾವಿರ ಕುಟುಂಬಗಳಿಗೆ ನೆರವು ದೊರೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.