ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾಗಲಿದೆ: ಸಚಿವ ಸುಧಾಕರ್​

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣಾ ಪ್ರದೇಶಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಬಹುದು ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಬಹುಶಃ ಎರಡ್ಮೂರು ವಾರಗಳಲ್ಲಿ ಸೊಂಕು ಹತೋಟಿಗೆ ಬರಲಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಏರಿಕೆ ಆಗಲಿದೆ. ಹೀಗಾಗಿ ಅಧಿಕಾರಿಗಳ ಜೊತೆ ವಿಸ್ತೃತವಾಗಿ ಸಮಾಲೋಚನೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗದಂತೆ ಸಿದ್ದತೆ ಮಾಡಿಕೊಳ್ಳಿ ಎಂದಿದ್ದೇನೆ ಎಂದು ತಿಳಿಸಿದರು.

ದೊಡ್ಡ ನಗರಗಳಲ್ಲಿ ಇಷ್ಟು ಆರೋಗ್ಯ ವ್ಯವಸ್ಥೆ ಇದ್ದರೂ ಐಸಿಯು, ವೆಂಟಿಲೇಟರ್ ಕೊರತೆ ಉಂಟಾಯ್ತು. ಹಾಗಾಗಿ ಗ್ರಾಮೀಣ ಭಾಗದಲ್ಲಿ ಸರಿಯಾಗಿ ನೋಡಿಕೊಳ್ಳಬೇಕಾಗುತ್ತದೆ. ಸರಿಯಾದ ಚಿಕಿತ್ಸೆ ನೀಡಬೇಕಾಗುತ್ತದೆ. ಈಗಿನಿಂದಲೇ ಕೋವಿಡ್ ಕೇರ್ ಸೆಂಟರ್ ಹಾಗೂ ಸ್ಟೆಪ್ ಡೌನ್ ಹಾಸ್ಪಿಟಲ್ ಸೇರಿದಂತೆ ವ್ಯವಸ್ಥೆ ಮಾಡಿಕೊಳ್ಳಿ ಎಂದ್ದಿದ್ದೇನೆ ಎಂದರು.

ಇಂದು ನಾನು ಹಲವು ತಾಲ್ಲೂಕು ಕೇಂದ್ರ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದೇನೆ. ಕೆ ಆರ್ ಪುರ , ಹೊಸಕೋಟೆ , ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕಡೆ ಭೇಟಿ ನೀಡುತ್ತೇನೆ. ನೇರವಾಗಿ ತಾಲ್ಲೂಕಿನ ಆಸ್ಪತ್ರೆಗಳಿಗೆ ಭೇಟಿ ಕೊಟ್ಟರೆ, ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ಸಿಗುತ್ತಿದೆ ಅಂತ ತಿಳಿಯುತ್ತೆ. ಹಾಗಾಗಿ ಖುದ್ದಾಗಿ ನಾನೇ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದೇನೆ.  ಈಗಾಗಲೇ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಬಂದಿರುವೆ. ಅದೇ ರೀತಿ ಇಂದು ಕೆಲವು ಕಡೆ ಭೇಟಿ ಕೊಡುತ್ತಿದ್ದೇನೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!