ರಷ್ಯಾ-ಉಕ್ರೇನ್ ಯುದ್ಧ: ಭಾರತೀಯರ ರಕ್ಷಣೆಗೆ ತೆರಳಲಿರುವ ನಾಲ್ವರು ಸಚಿವರು!

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷಿತವಾಗಿ ವಾಪಸ್ ಕರೆತರಲು ಕೇಂದ್ರದ ನಾಲ್ವರು ಸಚಿವರು ಉಕ್ರೇನ್ ಗಡಿ ಭಾಗದ ದೇಶಗಳಿಗೆ ತೆರಳಲಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ 5ನೇ ದಿನಕ್ಕೆ ಕಾಲಿಟ್ಟಿದ್ದು ಉಕ್ರೇನ್ ನಲ್ಲಿ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳ ರಕ್ಷಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಆರ್‌ಕೆ ಸಿಂಗ್ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯಾಚರಣೆ ಸಂಘಟಿಸಲು ಮತ್ತು ಸಹಾಯ ಮಾಡಲು ನೆರೆಯ ದೇಶಗಳಿಗೆ ವಿಶೇಷ ಪ್ರತಿನಿಧಿಗಳಾಗಿ ತೆರಳಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.

ಮೋದಿ ಉಕ್ರೇನ್ ಬಿಕ್ಕಟ್ಟಿನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವುದು ಮತ್ತು ಅವರನ್ನು ಸ್ಥಳಾಂತರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದ್ದರು.

ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರವನ್ನು ತ್ವರಿತಗೊಳಿಸಲು ಉಕ್ರೇನ್‌ನ ನೆರೆಯ ರಾಷ್ಟ್ರಗಳೊಂದಿಗೆ ಸಹಕಾರವನ್ನು ಇನ್ನಷ್ಟು ಹೆಚ್ಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!