‘ಆಪರೇಷನ್ ಕಮಲವನ್ನೇ ನೆಚ್ಚಿಕೊಂಡ ಬಿಜೆಪಿ ( bjp ) ವಿಕೃತ, ವಿಲಕ್ಷಣ, ವಿನಾಶಕಾರಿ ಪಕ್ಷ. ಬಡ ಯುವಕರ ರಕ್ತವೇ ಅವರ ಪಾಲಿನ ಅಧಿಕಾರಾಮೃತ. ಕಗ್ಗೊಲೆಗಳೇ ಅದರ ಕಸುಬು, ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ? ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ( kumarswamy ) ಕಿಡಿಕಾರಿದ್ದಾರೆ.
ಸಾಯಿ ಲೇಔಟ್ ಪುನಾ ತೇಲುತ್ತಿದೆ. ಅರ್ಕಾವತಿ ಲೇಔಟ್ ಪಕ್ಕದ ಆರ್ತನಾದ ಕೇಳುತ್ತಿಲ್ಲವೆ ಬಿಜೆಪಿಗರೇ? ಬೆಂಗಳೂರಿನ ಬಹುತೇಕ ಪ್ರದೇಶಗಳು ಜಲಾವೃತವಾಗಿ ದ್ವೀಪಗಳಾಗಿವೆ. ಅಲ್ಲಿ ಹರಿಯುತ್ತಿರುವುದು ನಿಜಕ್ಕೂ ಜನರ ಕಣ್ಣೀರಧಾರೆ. ʼಕೊಮುಪೊರೆʼಯ ಅಮಲಿನಲ್ಲಿ ಮುಚ್ಚಿಹೋಗಿರುವ ನಿಮ್ಮ ಕಣ್ಣುಗಳಿಗೆ ಜನರ ಕಣ್ಣೀರು ಕಾಣುವುದಿಲ್ಲ, ಅಲ್ಲವೇ? ಸರಣಿ ಕಗ್ಗೊಲೆಗಳು,ಆಚಾರ,ವಿಚಾರ,ವ್ಯಾಪಾರ,ಉಡುಗೆ-ತೊಡುಗೆ; ಅಷ್ಟೇ ಏಕೆ? ತಿನ್ನುವ ಅನ್ನದಲ್ಲೂ ನಿಮ್ಮ ವಿಕೃತಿ ಮೆರೆದಿದೆ. ತಂದೆ-ಮಕ್ಕಳ ಬಾಂಧವ್ಯದ ಬಗ್ಗೆ ವಿಕೃತಿ ತೋರುವ ನಿಮಗೆ, ಬಾಂಧವ್ಯಗಳ ಬಗ್ಗೆ ಜನರೇ ಪಾಠ ಕಲಿಸುವ ದಿನ ಹತ್ತಿರದಲ್ಲಿದೆ. ನಾವು ಮುಳುಗುವುದು, ತೇಲುವುದು ಆಮೇಲೆ. ನಿಮ್ಮನ್ನು ಜನ ಮುಳುಗಿಸಿಬಿಟ್ಟಾರು! ಎಚ್ಚರಿಕೆ ಎಂದು ಎಚ್,ಡಿ ಕೆ ಸಂದೇಶ ರವಾನಿಸಿದ್ದಾರೆ. ಇದನ್ನು ಓದಿ :- ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ – ಓರ್ವ ಬಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ
ನಾನು ಇನ್ನೊಬ್ಬರ ಕಣ್ಣೀರಿನ ಬಗ್ಗೆ, ಭಾವೋದ್ವೇಗದ ಕುರಿತು ಲಘುವಾಗಿ ಮಾತನಾಡಲಾರೆ. ಆದರೂ ವಿಕೃತಿ ಬಿಜೆಪಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ. ಅಧಿಕಾರ ಹೋಗುತ್ತದೆ ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ʼನಲ್ಲಿ ವಿದಾಯ ಭಾಷಣ ಮಾಡುತ್ತಾ ವೇದಿಕೆಯ ಮೇಲೆಯೇ ಕಣ್ಣೀರಧಾರೆ ಹರಿಸಿದವರು ಯಾವ ಪಕ್ಷದವರು? ಎಂದು ಪ್ರಶ್ನಿಸಿದ್ದಾರೆ.
ಪ್ರವಾಹಕ್ಕೆ ತುತ್ತಾಗಿ ಸತ್ತವರ ಬಗ್ಗೆ ಹನಿ ಕಂಬನಿ ಇಲ್ಲ, ಪಾತಕ ರಾಜಕೀಯಕ್ಕೆ ನಡುರಸ್ತೆಗಳಲ್ಲಿ ಕೊಲೆಯಾದ ಯುವಕರ ಬಗ್ಗೆ ಎಳ್ಳಷ್ಟು ಕರುಣೆ ಇಲ್ಲ. ಬಣ್ಣದ ಮಾತು, ಕೃತಕ ಸಾಂತ್ವನ!! ಆದರೂ, ಸಿನಿಮಾದಲ್ಲಿ ನಾಯಿ ಸತ್ತ ದೃಶ್ಯ ನೋಡಿ ಮಾಧ್ಯಮಗಳ ಮುಂದೆ ಗಳಗಳನೇ ಕಣ್ಣೀರಕೋಡಿ ಹರಿಸಿದ ಮಹಾಶಯರು ಯಾವ ಪಕ್ಷದ ಮುಖ್ಯಮಂತ್ರಿಗಳು? ಸ್ವಲ್ಪ ಹೇಳಿ..? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ :- ಒಂದೇ ತಿಂಗಳಲ್ಲಿ ತಿರುಪತಿಗೆ 140 ಕೋಟಿ ಕಾಣಿಕೆ ಸಂಗ್ರಹ