ಬಚ್ಚಲುಮನೆಯಲ್ಲಿ ಬಿದ್ದು ಗಾಯಗೊಂಡಿರುವ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಯಲ್ಲಿ ಬೆಡ್ ಗಾಗಿ ಪರದಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇತ್ತೀಚೆಗಷ್ಟೇ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಾಲುಮರದ ತಿಮ್ಮಕ್ಕ ಬಚ್ಚಲು ಮನೆಯಲ್ಲಿ ಬಿದ್ದು ಶಸ್ತ್ರಚಿಕಿತ್ಸೆ ಆಗಿದ್ದ ಜಾಗಕ್ಕೆ ಮತ್ತೊಮ್ಮೆ ಪೆಟ್ಟು ಮಾಡಿಕೊಂಡಿದ್ದಾರೆ.
ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ನಾನ್ ಕೋವಿಡ್ ಆಸ್ಪತ್ರೆಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಬೆಂಗಳೂರಿನ ನಾನಾ ಖಾಸಗಿ ಆಸ್ಪತ್ರೆಗಳಿಗೆ ಅಲೆದಿದ್ದಾರೆ.
ಈ ಹಿಂದೆ ಅಪೋಲೋ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತ ಚಿಕಿತ್ಸೆ ನೀಡಲಾಗಿತ್ತು. ಆದರೆ ಈ ಬಾರಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಿಕಿತ್ಸೆ ನೀಡಲು ಹಿಂದೇಟು ಹಾಕಲಾಗಿದೆ ಎಂದು ತಿಳಿದು ಬಂದಿದೆ.