ಬೆಂಗಳೂರು : ಕೊರೋನಾ ಸೋಂಕಿನ ವಿರುದ್ಧ ಹೋರಾಟ ಮುಂದುವರಿಸಿರುವ ಭಾರತದಲ್ಲಿ, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಟ ಪುನೀತ್ ರಾಜ್ಕುಮಾರ್ ಇಂದು ಕೊರೋನಾ ಲಸಿಕೆ ಪಡೆದುಕೊಂಡರು.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕೊರೋನಾ ಲಸಿಕೆಯನ್ನು ಹಾಕಿಸಿಕೊಂಡರು. ಕೋವಿಡ್ ಲಸಿಕೆ ಪಡೆದಿರುವ ಕುರಿತು ಟ್ವಿಟರ್‌ನಲ್ಲಿ, 45 ವರ್ಷ ವಯಸ್ಸಿನವರು ಹಾಗೂ ಅದಕ್ಕೂ ಮೇಲ್ಪಟ್ಟವರು ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಈಗಾಗಲೇ ಹಿಂದಿ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ತಾರೆಯರು ಕೋವಿಡ್ ಲಸಿಕೆ ಪಡೆದಿದ್ದಾರೆ. ಮಂಗಳವಾರ ಹಿರಿಯ ನಟ ನವರಸ ನಾಯಕ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ಜಗ್ಗೇಶ್ ಕೊರೋನಾ ಲಸಿಕೆ ಪಡೆದಿದ್ದಾರೆ.