ಕನ್ನಡದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗ ಕೋವಿಡ್ ಗೆ ಮತ್ತೊಬ್ಬರನ್ನು ಕಳೆದುಕೊಂಡಿದೆ.
ಕೊರೊನಾ ಸೋಂಕು ತಗುಲಿದ್ದ ಕಾರಣ ಎರಡು ದಿನಗಳ ಹಿಂದಷ್ಟೇ ರೇಣುಕಾಶರ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ತಡ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಡಾ.ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ, ರವಿಚಂದ್ರನ್ ಅಂಜದ ಗಂಡು, ಕಿಂದರಿ ಜೋಗಿ, ಅನಂತ್ ನಾಗ್ ಅಭಿನಯದ ಅನುಪಮ, ಸೇರಿದಂತೆ 12ಕ್ಕೂ ಹೆಚ್ಚು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದರು.