ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಕೆಸಿಎನ್ ಚಂದ್ರಶೇಖರ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆಸಿಎನ್ ಚಂದ್ರು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಿಗ್ಗೆ 9 ಗಂಟೆಗೆ ವಿಧಿವಶರಾಗಿದ್ದಾರೆ.
ಶಿವಾನಂದ ಸರ್ಕಲ್ ಬಳಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ಕೆಸಿಎನ್ ಚಂದ್ರು ನಿರ್ಮಿಸಿದ್ದರು.